ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಒಂಬತ್ತನೇ ವಾರ್ಷಿಕೋತ್ಸವದ ನಗರದ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ವಿಶೇಷವಾಗಿ 120 ರಾಷ್ಟ್ರಕವಿ ಕುವೆಂಪು ಅವರ ಜಯಂತೋತ್ಸವ ಹಾಗೂ ಡಾ ಪುನೀತ್ ರಾಜಕುಮಾರ್ ಅವರ ಸವಿ ನೆನಪಿಗಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಾ ಪ್ರಸನ್ನನಾಥ ಸ್ವಾಮೀಜಿ ರವರಿಂದ ಶಿವಮೊಗ್ಗ ನಗರದ 101 ಆಟೋ ಚಾಲಕರಿಗೆ ವಿಶೇಷವಾಗಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರಸನ್ನ ಗೌಡರು ನಗರದ ಗಣ್ಯ ವ್ಯಕ್ತಿಗಳು ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ ಎಂ ಪ್ರಧಾನ ಕಾರ್ಯದರ್ಶಿಗಳ ಸಂಕೇತ ಉಪಾಧ್ಯಕ್ಷರಾದ ಕುಬೇರ್ ಮತ್ತು ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಮತ್ತು ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.