ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದ ದೇವಂಗಿ ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ ಜಿ. ಹೆಚ್ಚುವರಿ ಪೊಲೀಸ್ ಅಧಿಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ಸಂಜೀವ್ ಕುಮಾರ್ ಟಿ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀಮತಿ ಚಂದ್ರಕಲಾ ಪಿಐ ವಿನೋಬನಗರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ದಾಳಿ ನಡೆಸಿ, ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸುರೇಂದ್ರ @ ಬಬ್ಲು, 30 ವರ್ಷ, ವಿನೋಬನಗರ, ಶಿವಮೊಗ್ಗ ಟೌನ್ ಈತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಅಂದಾಜು ಮೌಲ್ಯ 5,000/- ರೂಗಳ 363 ಗ್ರಾಂ ತೂಕದ ಒಣ ಗಾಂಜಾ, ರೂ 500/- ನಗದು ಹಣ, ಮತ್ತು ಕೃತ್ಯ ಕ್ಕೆ ಉಪಯೋಗಿಸಿದ ಅಂದಾಜು ಮೌಲ್ಯ 15,000/- ರೂಗಳ ಮೊಬೈಲ್ ಪೋನ್ ಸೇರಿದಂತೆ ಒಟ್ಟು 20,500/- ರೂಗಳ ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.