ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಕಚೇರಿ,ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಎನ್ ಸಿ ಡಿ ಘಟಕ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮ, DAPCU ವಿಭಾಗ, ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಶಿವಮೊಗ್ಗ
ಸಹಯೋಗದೊಂದಿಗೆ ನಗರದ ಅಂಬೇಡ್ಕರ್ ಭವನದಲ್ಲಿ “ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ” ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ನಾಗೇಶ್ ವಹಿಸಿದ್ದರು. ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ.ರೇಖಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಬಿ
ಚಂದ್ರಶೇಖರ್ , ಸಹಾಯಕ ಕಾರ್ಯಪಾಲಕ ಅಭಿಯಂತರರು ಪುಷ್ಪವತಿ, ಪರಿಸರ ಅಭಿಯಂತರು ತ್ರಿವೇಣಿ, ಜಿಲ್ಲಾ ದಂತ ನೋಡಲ್ ಅಧಿಕಾರಿ ಡಾ. ಮೋಹನ್, ಸುಬ್ಬಯ್ಯ ದಂತ ಮಹಾವಿದ್ಯಾಲಯದ
ಡಾ. ವಿವೇಕ್ ,ದಂತ ಆರೋಗ್ಯ ಅಧಿಕಾರಿ ಡಾ. ಸತೀಶ್, ಮಲ್ನಾಡ್ ಕ್ಯಾನ್ಸರ್ ಹಾಸ್ಪಿಟಲ್ ನ ರೇಡಿಯೋ ಅಂಕಾಲಜಿಸ್ಟ್ ಡಾ. ಅಮಿತ್ ರಾಜ್, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಡಾ. ಹರ್ಷವರ್ಧನ್ , ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರು ಹೇಮಂತ್ ರಾಜ್ ಅರಸ್, ಎನ್.ಸಿ.ಡಿ ವಿಭಾಗದ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ. ಅಫೀಫಾ ಉಪಸ್ಥಿತರಿದ್ದರು.
ಸಮಾಜ ಕಾರ್ಯಕರ್ತರಾದ ರವಿರಾಜ್ ಜಿ.ಕೆ, ಆಪ್ತ ಸಮಾಲೋಚಕರಾದ ಶಿವಕುಮಾರ್ ಎಸ್.ಟಿ, ಪ್ರವೀಣ್ ಕೆ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಗಳು ಮತ್ತು ಸಿಬ್ಬಂದಿಗಳು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮ
ದಲ್ಲಿ ಭಾಗವಹಿಸಿದ್ದರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 282 ಜನ ಪೌರ ಕಾರ್ಮಿಕರು ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದರು.