ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಅಧ್ಯಕ್ಷತೆಯಲ್ಲಿ “ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು.
ಶಿಕ್ಷಣ ಇಲಾಖೆಯಲ್ಲಿ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಿರುವ ಅನೇಕ ಅಭಿವೃದ್ದಿ ಕಾರ್ಯಗಳು ಹಾಗೂ ಹೊಸ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ಪ್ರಸ್ತುತ ಇಲಾಖೆಯಲ್ಲಿನ ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಿ.ರಶ್ಮಿ ಮಹೇಶ್, ಆರ್ಥಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ಎಂ. ಕುರ್ಮರಾವ್, ಸಮಗ್ರ ಶಿಕ್ಷಣ ಕರ್ನಾಟಕ (ಗುಣಮಟ್ಟ) ನಿರ್ದೇಶಕರಾದ ಶ್ರೀ ಎಂ.ಆರ್ ಮಾರುತಿ, ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರಾದ ಕೃಷ್ಣಾಜೀ ಕರಿಚನ್ನಣ್ಣನವರ್, ಪ್ರಾಥಮಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಡಾ. ಸಿಪ್ರಿಯಾನ್ ಮಾಂಟೆರೋ ಮತ್ತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(D.S.E.R.T) ಪ್ರಭಾರ ನಿರ್ದೇಶಕರಾದ ಶ್ರೀ ಗೋಪಾಲ ಕೃಷ್ಣ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.