ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ…

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯಾಭಿವೃದ್ಧಿ ಮತ್ತು ಲೋಕಕಲ್ಯಾರ್ಥವಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಫೆಬ್ರವರಿ 4 ರಂದು ನವಚಂಡೀಯಾಗ, ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೊರಂಗ್ರಪಾಡಿ ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅವರ ಉಪಸ್ಥಿತಿಯಲ್ಲಿ ನವಚಂಡೀಯಾಗ ಆರಂಭಗೊಂಡು, ಕಲ್ಪೋಕ್ತ ಪೂಜಾ, ಮಹಾಮಂಗಳಾರತಿ, ಪೂರ್ಣಾಹುತಿ, ಮಹಾಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಿತು.ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅವರು ದೀಪ ಪ್ರಜ್ವಲನೆಗೈದು ನವಚಂಡೀಯಾಗದ ಸಂಕಲ್ಪ ನೆರವೇರಿಸಿದರು.

ಉಡುಪಿ‌ ಶ್ರೀ ಪೇಜಾವರ ಅಧೋಕ್ಷಜ‌ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ದಂಪತಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ದಂಪತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ದಂಪತಿ ನವಚಂಡೀಯಾಗದ ಸಂಕಲ್ಪದಲ್ಲಿ ಪಾಲ್ಗೊಂಡಿದ್ದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದ. ಕ. ಜಿಲ್ಲಾ ಕೇಂದ್ರ‌ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಆರ್.ಜಿ ಗ್ರೂಫ್ಸ್ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ತಹಶೀಲ್ದಾರ್ ಡಾ. ಪ್ರತಿಭಾ ಆರ್., ರಜತರಥದ ದಾನಿ ಆನಂದ ಶೆಟ್ಟಿ ಮುಂಬಯಿ, ಪ್ರಭಾಕರ ಶೆಟ್ಟಿ ಮಂಡಗದ್ದೆ, ಆರ್ಥಿ‌ಕ‌ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಮುಂಬಯಿ‌ ಸಮಿತಿ ಉಪಾಧ್ಯಕ್ಷ ಕೃಷ್ಣ ವೈ. ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಇನ್ನಾ ಸಂತೋಷ್ ಶೆಟ್ಟಿ ಪುಣೆ, ಅಂತರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಮಲ್ಲಾರು ಶಶಿಧರ ಶೆಟ್ಟಿ ಮಸ್ಕತ್, ಮಲ್ಲಾರು ದಿವಾಕರ ಶೆಟ್ಟಿ ಮಸ್ಕತ್ ಸಮಿತಿ ಉಪಾಧ್ಯಕ್ಷರಾದ ಮನೋಹರ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ಕಾಪು ದಿವಾಕರ ಶೆಟ್ಟಿ, ಡ ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಧಿಕಾರಿ ಕೆ. ರವಿಕಿರಣ್, ನವದುರ್ಗಾ ಲೇಖನ‌ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ, ಕಾರ್ಯಾಧ್ಯಕ್ಷರಾದ ಕೃಷ್ಣ ಪ್ರಸಾದ್ ಅಡ್ಯಂತಾಯ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಅಶೋಕ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಸಂಚಾಲಕ ಸುವರ್ಧನ ನಾಯಕ್, ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ.‌ ಸುವರ್ಣ, ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ, ಮುಂಬಯಿ ಸಮಿತಿ ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *