ಶ್ರೀಮತಿ ಶಾಂತಲಾ ಪಿಎಸ್ಐ, ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಭದ್ರಾವತಿಯ ಜೆ.ಟಿ.ಎಸ್ (ಜೂನಿಯರ್ ಟೆಕ್ನಿಕಲ್ ಸ್ಕೂಲ್) ಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ವಿಧ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಮಕ್ಕಳು ತಮ್ಮ ಸುರಕ್ಷತೆಗಾಗಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು, ಸಾಮಾಜಿಕ ಜಾಲತಾಣದ ಸುರಕ್ಷಿತ ಬಳಕೆ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ, ತುರ್ತು ಮತ್ತು ಅಗತ್ಯ ಸಂದರ್ಭದಲ್ಲಿ ERSS -112 ಸಹಾಯವಾಣಿ ಬಳಕೆಯ ಬಗ್ಗೆ ಮಾಹಿತಿಯನ್ನು ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಶಾಲೆಯ ವಿಧ್ಯಾರ್ಥಿಗಳು ಮತ್ತು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.