ಕಾಪು ಶ್ರೀ ಹೊಸ ಮಾರಿಗುಡಿ ದೇವಾಲಯ…


ಕರ್ನಾಟಕ ರಾಜ್ಯದಲ್ಲಿ ಪ್ರಸಿದ್ಧ ಕ್ಷೇತ್ರವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಗೆ ಸಮರ್ಪಣೆಗೊಳ್ಳಲಿ ರುವ ನೂತನ ಸ್ವರ್ಣ ಗದ್ದುಗೆ, ರಜತ ರಥ, ಚಿನ್ನದ ಮುಖ, ಉಚ್ಚಂಗಿ ದೇವಿಯ ಚಿನ್ನದ ಪಾದಪೀಠ, ಚಿನ್ನದ ಮುಖ, ಬೃಹತ್ ಘಂಟೆ ಹಾಗೂ ರಾಜಗೋಪುರದ ಮಹಾದ್ವಾರದ ಹೆಬ್ಬಾಗಿಲು ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಗೆ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮತ್ತು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಫೆಬ್ರವರಿ 9ರಂದು ಚಾಲನೆ ನೀಡಿದರು. ಉಡುಪಿಯ ರಾಷ್ಟ್ರೀಯ ಹೆದ್ದಾರಿಯಲಿ ಅದ್ದೂರಿಯ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು.




ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ನೇತೃತ್ವದಲ್ಲಿ ಭಕ್ತರಿಂದ ಸಂಗ್ರಹಿಸಿದ ಚಿನ್ನದೊಂದಿಗೆ ಸುಮಾರು 15 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾದ ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ ಮತ್ತು ಚಿನ್ನದ ಮುಖ, ಮುಂಬಯಿ ಆರ್ಗಾನಿಕ್ ಇಂಡಸ್ಟ್ರೀಸ್ ಎಂಡಿ ತೋನ್ಸೆ ಆನಂದ ಎಂ. ಶೆಟ್ಟಿ – ಶಶಿರೇಖಾ ಆನಂದ ಶೆಟ್ಟಿ ದಂಪತಿ ಸಮರ್ಪಿಸಿದ ರಜತ ರಥ, ಮುಂಬಯಿ ಅಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ಆ್ಯಂಡ್ ರೆಯಲ್ಟರ್ಸ್ ಸಿಎಂಡಿ ಅರವಿಂದ್ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಸಮರ್ಪಿಸಿದ ಘಂಟೆ, ಉಳಿಯಾರ ಗೋಳಿ ರಾಧಾಛಾಯ ದಿ| ಸುಂದರ ಶೆಟ್ಟಿ ಮತ್ತು ದಿ|ರಾಧಾ ಸುಂದರ ಶೆಟ್ಟಿ ಅವರ ಮಕ್ಕಳು ಹಾಗೂ ಮುಂಬಯಿ ತುಂಗಾ ಗ್ರೂಪ್ಸ್ ಆಡಳಿತ ಸಿಎಂಡಿ ಎಂ. ಸುಧಾಕರ ಹೆಗ್ಡೆ ಮತ್ತು ರಂಜನಿ ಸುಧಾಕರ ಹೆಗ್ಡೆ ದಂಪತಿ ಸಮರ್ಪಿಸುವ ರಾಜಗೋಪುರದ ಮಹಾದ್ವಾರದ ಬಾಗಿಲು, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಬೀನಾ ವಾಸುದೇವ ಶೆಟ್ಟಿ ದಂಪತಿ ಸಮರ್ಪಿಸಿದ ಉಚ್ಚಂಗಿ ದೇವಿಯ ಸ್ವರ್ಣ ಮುಖ ಹಾಗೂ ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಡಾ| ಪ್ರಶಾಂತ್ ಶೆಟ್ಟಿ ಮತ್ತು ಡಾ| ಪ್ರನ್ನಾ ಪಿ. ಶೆಟ್ಟಿ ದಂಪತಿ ಸಮರ್ಪಿಸಿದ ಚಿನ್ನದ ಸೊಂಟ ಪಟ್ಟಿಯನ್ನು ಶೋಭಾಯಾತ್ರೆ ಮುಂಚೆ ಅದ್ದೂರಿಯಾಗಿ ಅನಾವರಣ ಮಾಡಿದರು.




ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಸುನಿಲ್ ಕುಮಾರ್, ಮಾಜಿ ಸಚಿವ ರಾದ ವಿನಯ್ ಕುಮಾರ್ ಸೊರಕೆ, ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಕೆ. ರಘುಪತಿ ಭಟ್, ಬಂಜಾರ ಪ್ರಕಾಶ್ ಶೆಟ್ಟಿ ,ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯ ನಿರ್ವಹಣಾಧಿಕಾರಿ ರವಿ ಕಿರಣ್, ತಂತ್ರಿ ವಿ| ಕುಮಾರ ಗುರು ತಂತ್ರಿ ಕೊರಂಗ್ರಪಾಡಿ, ಅರ್ಚಕ ವೇ| ಶ್ರೀನಿವಾಸ ತಂತ್ರಿ ಕಲ್ಯ, ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣೆ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಕೋತ್ವಾಲಗುತ್ತು, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಡಾ| ರಾಜಶೇಖರ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ ವಿಕ್ಕಿ ರಘುರಾಮ್ ಶೆಟ್ಟಿ ವಿಶ್ವನಾಥ್ ಹಾಗೂ ಎಲ್ಲ ಸಮಿತಿಗಳ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.