
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಬ್ಯಾರಿಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ- ಯುಎಇ ಯವರು ದುಬೈನಲ್ಲಿ ಆಯೋಜಿಸಿದ್ದ “ಬ್ಯಾರಿ ಮೇಳ” ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸಮಾರಂಭದಲ್ಲಿ ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಯುಟಿ ಖಾದರ್ ರವರು ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷರಾದ ಡಾ. ತುಂಬೆ ಮೊಯಿದ್ದೀನ್, ಗಣ್ಯರಾದ ಶ್ರೀ ರೊನಾಲ್ಡೋ ಕೊಲಾಸೋ, , ಸಚಿವ ಸಂಪುಟ ಸದಸ್ಯರಾದ ಶ್ರೀ ರಹೀಂಖಾನ್, ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರಾದ ಶ್ರೀಮತಿ ಡಾ. ಆರತಿ ಕೃಷ್ಣ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎನ್.ಎ ಹ್ಯಾರಿಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶ್ರೀ ಮೆಹರೋಜ್ ಖಾನ್ , ರೋನಾಲ್ಡೊ ಕ್ಯೂಯಸೋ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.