ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಫೆ.14 ರ ಬೆಳಿಗ್ಗೆ 11.00 ರಿಂದ 1.00 ವರೆಗೆ ಮೆಸ್ಕಾಂ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದ್ದು, ಈ ಸಭೆಯಲ್ಲಿ ಗ್ರಾಹಕರ ಕುಂದು ಕೊರತೆ ಮತ್ತು ಅಹವಾಲನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.