
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:20/02/2025 ರಿಂದ ದಿ:21/03/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.