ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪನವರು ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ “ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ” ಕಾರ್ಯಮವನ್ನು ದಿವ್ಯಸಾನಿಧ್ಯ ವಹಿಸಿದ್ದ ಪರಮಪೂಜ್ಯ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀ ಶ್ರೀ ಶಿವಾನಂದ ಸ್ವಾಮೀಜಿಯವರೊಂದಿಗೆ ಉದ್ಘಾಟಿಸಿದರು .

ಬಳಿಕ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆನು. ಸ್ಮರಣ ಸಂಚಿಕೆ ಕೃತಿ ಬಿಡುಗಡೆಗೊಳಿಸಿ, ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಲೆನಾಡು ದೇವಾಂಗ ಸಮಾಜದ ಅಧ್ಯಕ್ಷರಾದ ಶ್ರೀ ಪಿ.ಆರ್ ಗಿರಿಯಪ್ಪ, ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ, ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ಶ್ರೀನಿವಾಸ್ ಮೂರ್ತಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *