ಉತ್ತರ ಪ್ರದೇಶ ರಾಜ್ಯದ ಪ್ರಯಾಗ್ ರಾಜ್ ನಲ್ಲಿ ಅದ್ಧೂರಿಯಾಗಿ ನೆರವೇರಿದ ವಿಶ್ವ ವಿಖ್ಯಾತ ಮಹಾಕುಂಭಮೇಳಕ್ಕೆ ತೆರೆ ಬಿದ್ದಿದೆ. ಕಳೆದ 45 ದಿನಗಳಿಂದ ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ಥಾನ ಮಾಡಿದರು.
ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದಿಂದ ಪ್ರಾರಂಭವಾದ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೂ 64 ಕೋಟಿ ಭಕ್ತರು ಭೇಟಿ ಕೊಟ್ಟು ಪುಣ್ಯಸ್ನಾನ ಮಾಡಿದ್ದಾರೆ ಎನ್ನಲಾಗಿದೆ.
ಮಹಾಶಿವರಾತ್ರಿ ಪ್ರಯುಕ್ತ ಕೊನೆಯ ದಿನವಾದ ನೆನ್ನೆ ಅಮೃತಸ್ಥಾನದಲ್ಲಿ 1ಕೋಟಿ ಹೆಚ್ಚು ಭಕ್ತರು ಪವಿತ್ರ ಅಮೃತಸ್ನಾನ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪವಿತ್ರ ಅಮೃತ ಸ್ಥಾನ ಮಾಡಿದ್ದಾರೆ.