
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶೆಡ್ತಿಕೆರೆ ಗ್ರಾಮದಲ್ಲಿ ವೃದ್ಧ ದಂಪತಿಗಳಿಬ್ಬರು ಮನೆಯೊಳಗೆ ಇದ್ದಾಗ ವ್ಯಕ್ತಿಯೊಬ್ಬನು ವಿಧ್ಯುತ್ ಸಂಪರ್ಕ ಕಡಿತಗೊಳಿಸಿ ಮನೆಯೊಳಗೆ ನುಗ್ಗಿ ವೃದ್ದ ಮಹಿಳೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0047/2025 ಕಲಂ 309(4), 332(ಬಿ), ಬಿಎನ್ಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಕಿತ್ತುಕೊಂಡು ಹೋದ ಮಾಂಗಲ್ಯ ಸರ ಮತ್ತು ಆರೋಪಿಯ ಪತ್ತೆಗಾಗಿ ಶ್ರೀ ಮಿಥುನ್ ಕುಮಾರ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2 ಶಿವಮೊಗ್ಗ ಜಿಲ್ಲೆ. ರವರ ಮಾರ್ಗದರ್ಶನದಲ್ಲಿ, ಶ್ರೀ ಗೋಪಾಲಕೃಷ್ಣ ನಾಯ್ಕ ಟಿ. ಪೊಲೀಸ್ ಉಪಾಧೀಕ್ಷಕರು ಸಾಗರ ಉಪವಿಭಾಗರವರ ಮೇಲ್ವಿಚಾರಣೆಯಲ್ಲಿ ಶ್ರೀ ಮಹಾಬಲೇಶ್ವರ ಎಸ್.ಎನ್, ಪಿಐ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದ ಶ್ರೀ ಸಿದ್ದರಾಮಪ್ಪ ಪಿ.ಎಸ್.ಐ ಹಾಗೂ ಸಿಬ್ಬಂದಿಗಳಾದ ಸಿಹೆಚ್ಸಿ ಷೇಖ್ ಫೈರೋಜ್ ಅಹಮ್ಮದ್. ಸಿಪಿಸಿ ರವಿಕುಮಾರ್. ಹನುಮಂತ ಜಂಬೂರ್, ನಂದೀಶ್, ಪ್ರವೀಣ್ ಕುಮಾರ್, ವಿಶ್ವನಾಥ, ಚಾಲಕರಾದ ಎ.ಹೆಚ್.ಸಿ ಗಿರೀಶ್ ಬಾಬು ಜಿಲ್ಲಾ ತಾಂತ್ರಿಕ ಘಟಕದ ಹೆಚ್ ಸಿ ಇಂದ್ರೇಶ್, ಗುರುರಾಜ್ ಮತ್ತು ವಿಜಯ್ ಕುಮಾರ್ ರವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
ಸದರಿ ತನಿಖಾ ತಂಡವು ದಿನಾಂಕಃ 02-03-2025 ರಂದು ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿ ರವಿ ಕುಮಾರ್ ಸಿ, 39 ವರ್ಷ, ಕೂಲಿ ಕೆಲಸ, ಶೆಡ್ತಿಕೆರೆ ಗ್ರಾಮ, ವರದಮೂಲ ಪೊಸ್ಟ್, ಸಾಗರ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಅಂದಾಜು ಮೌಲ್ಯ *2,26,000/- ರೂಗಳ 26 ಗ್ರಾಂ 400 ಮಿಲಿ ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಅಮಾನತ್ತುಪಡಿಸಿಕೊಳ್ಳಲಾಗಿರುತ್ತದೆ.
ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.