
ವಿದ್ಯಾಭ್ಯಾಸದ ಜೊತೆಗೆ ಮಕ್ಕಳಲ್ಲಿ ದೇಶಪ್ರೇಮ ಸಂಸ್ಕಾರ ಹಾಗೂ ಶಿಸ್ತನ್ನು ಬೆಳೆಸಲು ಸ್ಕೌಟ್ ಅಂಡ್ ಗೈಡ್ಸ ಸಂಸ್ಥೆಗಳು ತುಂಬಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಕೋಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಬಾಗೋಜಿ ಅಭಿಮತ ವ್ಯಕ್ತಪಡಿಸಿದರು.
ಅವರು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಶಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ರ‍್ಯಾಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ಕೌಟ್ನಲ್ಲಿ ಭಾಗವಹಿಸುವುದರಿಂದ ಮಕ್ಕಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢನಾಗುತ್ತಾರೆ ಹಾಗೂ ಆತ್ಮವಿಶ್ವಾಸ ವೃದ್ಧಿಸುವುದರ ಜೊತೆಗೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ನಿರ್ಮಾಣವಾಗುತ್ತಾರೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಬಿ ಇ ಓ ಕಚೇರಿಯ ಅಧಿಕಾರಿಗಳಾದ ಶ್ರೀಮತಿ ಶಶಿರೇಖಾ ಅವರು ಮಾತನಾಡುತ್ತ ಬಾಲ್ಯದಲ್ಲಿ ಮಕ್ಕಳಿಗೆ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತೊಡಗಿಸಬೇಕು ಇದರಿಂದ ಪ್ರಾಪಂಚಿಕ ಜ್ಞಾನ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಾಗೂ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ವೃದ್ಧಿಸಲು ಅತ್ಯಂತ ಸಹಕಾರಿಯಾಗಿದೆ ಎಂದು ಹೇಳಿದರು.
ಈ ಜಾಗೃತಿ ಜಾಥಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೈಡ್ ಕಮಿಷನರ್ ರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ ಅವರ ವಹಿಸಿ ಮಾತನಾಡಿದರು.ಈ ರ‍್ಯಾಲಿಯಲ್ಲಿ ಸ್ಕೌಟ್ ಕಮಿಷನರ್ ಆನಂದ್ ಎಸ್ ಜಿ. ರಾಜೇಶ್ ಅವಲಕ್ಕಿ . ಶಿವಶಂಕರ್ ಎಚ್. ಚೌಡಮಣಿ ಈ ಪವಾರ್. ಮಲ್ಲಿಕಾರ್ಜುನ್ ಖಾನೂರ್ ರಾಘವೇಂದ್ರ ಲಕ್ಷ್ಮಿ ರವಿ ವೀರೇಶಪ್ಪ ಗೀತಾ ಚಿಕ್ಕಮಠ ಒಂಟಿ ಮಾಳಿಗಪ್ಪ ಎಲ್ಲಾ ಕೌಟ್ಸ್ ಅಂಡ್ ಗೈಡ್ಸ್ ಶಿಕ್ಷಕರು ಪದಾಧಿಕಾರಿಗಳು ಕಬ್ಸ್ ಬುಲ್ ಬುಲ್. ಮಕ್ಕಳು ಉಪಸ್ಥಿತರಿದ್ದರು ರ್ಯಾಲಿಯೂ ಪೊಲೀಸನವರ ಸಹಕಾರದೊಂದಿಗೆ ಆಕರ್ಷಕ ಬ್ಯಾಂಡ್ ಸೆಟ್ ನೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ಭವನ ತಲುಪಿತು.