ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.


ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾ.19ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷಾö್ಯಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.

ಮಾ.20 ರಂದು ಬೆಳಿಗ್ಗೆ 11.00 ರಿಂದ 11.30 ರವರೆಗೆ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಈ ಸಮಯದಲ್ಲಿ ದೂರುದಾರರು ಮತ್ತು ಎದುರುದಾರರ ಹಾಜರಿದ್ದು ಇದರ ಸದುಪಯೋಗಪಡೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ. ಎಂ.ಹೆಚ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *