ಶಿವಮೊಗ್ಗ : ಬೆಂಗಳೂರಿನ ಜೆಪಿ ನಾರಾಯಣ ಸ್ವಾಮಿ ಪ್ರತಿಷ್ಠಾನ ವತಿಯಿಂದ ಜಿಲ್ಲಾ ಆರ್ಯ ಈಡಿಗರ ಸಂಘದ ಸಹಯೋಗದಲ್ಲಿ ಆರ್ಯ ಈಡಿಗರ ಸಮುದಾಯ ಭವನದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆರ್ಯ ಈಡಿಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೋಮವಾರ ಪ್ರತಿಭಾ ಪುರಸ್ಕಾರ ನೀಡಲಾಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶ್ರೀ ವಿಖ್ಯಾತನಂದಸ್ವಾಮೀಜಿ, ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಆರ್. ಹುಲ್ತಿಕೊಪ್ಪ, ಪ್ರತಿಷ್ಠಾನದ ಡಾ.ಎಚ್.ಎಲ್. ಶಿವಾನಂದ, ಕಾರ್ಯದರ್ಶಿ ಕುಸುಮಾ ಮೊದಲಾದವರು ಇದ್ದರು.