ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್, ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಡಾ.ಎಂ.ಸಿ ಸುಧಾಕರ್ ಅವರೊಂದಿಗೆ ಸಭೆ ನಡೆಸಲಾಯಿತು.

ಸುಮಾರು 650 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಸೊರಬ ತಾಲೂಕಿನ 331 ಗ್ರಾಮಗಳು ಹಾಗೂ ಸೊರಬ, ಶಿರಾಳಕೊಪ್ಪ ಮತ್ತು ಆನವಟ್ಟಿ ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆ ಸಂಬಂಧಿಸಿದಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ಯೋಜನೆಯನ್ನು ಮಂಜೂರು ಮಾಡುವಂತೆ ಒತ್ತಾಯಿಸಿದೆ. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಯೊಜನೆಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.

ಈ ವೇಳೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಪೊನ್ನಣ್ಣ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.