ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯಲ್ಲಿ ಗೋ ಮಾಂಸ ತುಂಬಿದ ಪಿಕಪ್ ವಾಹನ ಒಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವಾಹನವು ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತ್ತಿತ್ತು.ತರಕಾರಿ ತುಂಬಿದ ವಾಹನದಲ್ಲಿ ಅಂದಾಜು 250 ರಿಂದ 300 ಕೆ .ಜಿ ಗೋಮಾಂಸ ಇರಬಹುದು ಎಂದು ತಿಳಿದುಬಂದಿದೆ.ವಿಶ್ವ ಹಿಂದು ಪರಿಷತ್ ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡರು. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ