ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮವು ನಗರದ ಮಧುರ ಪ್ಯಾರಡೈಸ್ ನಲ್ಲಿ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದವರು ಆಹಾರ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಗ್ರಾಹಕರಿಗೆ ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಆಹಾರ ಸುರಕ್ಷಿತ ಮತ್ತು ಔಷಧಿ ಆಡಳಿತ ಇಲಾಖೆಯ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆಹಾರ ಉದ್ಯಮಿದಾರರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರಿಗೆ ವಿಷಯ ಮುಟ್ಟಿಸುವ ಒಳ್ಳೆಯ ಕಾರ್ಯಕ್ರಮ ಎಂದರು. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಇಂತಹ ಕಾರ್ಯಕ್ರಮಗಳನ್ನು ಮಾಡಿ ತಿಳುವಳಿಕೆ ಮೂಡಿಸಲಿ ಎಂತಾಗಲು ಎಂದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಮತ್ತು ಆಹಾರ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಉದ್ಯಮಿದಾರರು ಉಪಸ್ಥಿತರಿದ್ದರು.