“ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ ಕ್ಷಣದ ಸಂಭ್ರಮ”
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾದ ಹಿನ್ನೆಲೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಎಸ್.ಸಿ, ಎಸ್.ಟಿ ಮೋರ್ಚಾ ವತಿಯಿಂದ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ ಅವರು ಪಾಲ್ಗೊಂಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಎನ್ ಕೆ ಜಗದೀಶ್, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ರಾದ ಹರೀಶ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಸಿ ಮಾಲತೇಶ್,ಎಂ.ಬಿ ಹರಿಕೃಷ್ಣ ಶಿವಮೊಗ್ಗ ಜಿಲ್ಲಾ ಬಿಜೆಪಿ ಎಸ್.ಸಿ, ಎಸ್.ಟಿ ಮೋರ್ಚಾದ ಪದಾಧಿಕಾರಿಗಳು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮದಲ್ಲಿ ಭಾಗಿಯಾಗಿದ್ದರು.