ಶಿವಮೊಗ್ಗ ಸ್ಮಾರ್ಟ್ ಸಿಟಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಸ್ಮಾರ್ಟ್ ಸಿಟಿ ಭ್ರಷ್ಟ ಅಧಿಕಾರಿ ಕೃಷ್ಣಪ್ಪ ಮೇಲೆ ಲೋಕಾಯುಕ್ತ ಪೊಲೀಸ್ ತಂಡ ದಾಳಿ ನಡೆಸಿದ್ದಾರೆ.

ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೃಷ್ಣಪ್ಪ ರವರು ಸ್ಮಾರ್ಟ್ ಸಿಟಿ ಕೆಲಸದ ಬಿಲ್ಲಿಗೆ ಸಂಬಂಧಪಟ್ಟಂತೆ ಒ ಅಂಡ್ ಎಂ ಬಿಲ್ ಪಾಸ್ ಮಾಡಲು ಗುತ್ತಿಗೆದಾರನ ಬಳಿ 1 ಲಕ್ಷದ ಹಣದ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರರ ಬಿಲ್ ಪಾಸ್ ಮಾಡದೇ ಇರುವ ಕಾರಣ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಗುತ್ತಿಗೆದಾರರ ದೂರು ನೀಡಿದ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಸಮಯದಲ್ಲಿ ಕೃಷ್ಣಪ್ಪ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ತಂಡಕ್ಕೆ ಸಿಕ್ಕಿದ್ದಾರೆ. ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *