ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ, ಶ್ರೀ ಎಸ್, ಮಧು ಬಂಗಾರಪ್ಪನವರ ಜಿಲ್ಲಾ ಕಚೇರಿಯನ್ನು ಜಿಲ್ಲಾ ಪಂಚಾಯಿತಿ ಕಟ್ಟಡದಿಂದ ನೆಹರು ರಸ್ತೆಯ ಸ್ಮಾರ್ಟ್ ಸಿಟಿ ಕಚೇರಿಗೆ ಸ್ಥಳಾಂತರಿಸುತ್ತಿದ್ದು 23ರ ಬುಧವಾರ ಬೆಳಗ್ಗೆ 7:30 ಗಂಟೆಗೆ ನಡೆಯಲಿರುವ ಪೂಜಾ ಕಾರ್ಯಕ್ರಮಕ್ಕೆ ಮಾನ್ಯ ಸಚಿವರು ಆಗಮಿಸಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಪಕ್ಷದ ಶಾಸಕರುಗಳು ಮಾಜಿ ಶಾಸಕರುಗಳು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಪದಾಧಿಕಾರಿಗಳು ಚುನಾಯಿತ ಪ್ರತಿನಿಧಿಗಳು ಈ ಹಿಂದಿನ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಆದ್ದರಿಂದ ತಾವುಗಳೆಲ್ಲರೂ ಸಕಾಲಕ್ಕೆ ಆಗಮಿಸಿ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಶುಭ ಹಾರೈಸಬೇಕಾಗಿ ವಿನಂತಿದ್ದಾರೆ.
ತಮ್ಮ ಆಗಮನ ನಿರೀಕ್ಷೆಯಲ್ಲಿ
ಆರ್, ಪ್ರಸನ್ನ ಕುಮಾರ್
ಅಧ್ಯಕ್ಷರು,
ಜಿಲ್ಲಾ ಕಾಂಗ್ರೆಸ್ ಸಮಿತಿ ಶಿವಮೊಗ್ಗ.