ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ ಜಿ. ಹೆಚ್ಚುವರಿ ಪೊಲೀಸ್ ಅಧಿಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ಕೃಷ್ಣಮೂರ್ತಿ ಕೆ ಪೊಲೀಸ್ ಉಪಾಧೀಕ್ಷಕರು ಸಿಇಎನ್ ಕ್ರೈಂ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ *1.ಆಕಾಶ ಸಿ @ ಮಚ್ಚೆ,* 20 ವರ್ಷ, ವಾಸ ಶಾಂತಿನಗರ ರಾಗಿಗುಡ್ಡ, ಶಿವಮೊಗ್ಗ ಹಾಲಿ ವಾಸ ಆಶ್ರಯ ಬಡಾವಣೆ “ಇ” ಬ್ಲಾಕ್ ಬೊಮ್ಮನಕಟ್ಟೆ, ಶಿವಮೊಗ್ಗ ಟೌನ್, 2. ವಿ ದರ್ಶನ್ 22 ವರ್ಷ, ವಾಸ ವಿನೋಬನಗರ, ನ್ಯಾಮತಿ ಟೌನ್, ದಾವಣಗೆರೆ ಜಿಲ್ಲೆ, 3. ಕೇಶವ ವಿ, 21 ವರ್ಷ, ವಾಸ ಆಶ್ರಯ ಬಡಾವಣೆ ಬೊಮ್ಮನಕಟ್ಟೆ, ಶಿವಮೊಗ್ಗ ಟೌನ್, 4. ನಾಗರಾಜ ಎಂ 21 ವರ್ಷ, ಆಶ್ರಯ ಬಡಾವಣೆ ಬೊಮ್ಮನಕಟ್ಟೆ, ಶಿವಮೊಗ್ಗ ಟೌನ್ ಇವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 20,000/- ರೂಗಳ 1 ಕೆಜಿ 225 ಗ್ರಾಂ ತೂಕದ ಒಣ ಗಾಂಜಾ ವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
