ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ನಡೆಯುತ್ತಿರುವ 2025-26 ನೇ ಸಾಲಿನ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಂಗಳವಾರದAದು ಅಗ್ನಿಶಾಮಕ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಆವರಣದಲ್ಲಿ 5 ರಿಂದ 16 ವರ್ಷದ ಮಕ್ಕಳಿಗೆ “ಅಗ್ನಿಶಾಮಕ ಜಾಗೃತಿ ಕಾರ್ಯಕ್ರಮ” ವನ್ನು ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿ ಅವಘಡದಿಂದ ಹೇಗೆ ಪಾರಾಗಬೇಕೆಂಬ ಕುರಿತು ಪ್ರಾಯೋಗಿಕ ತರಬೇತಿಯ ಮೂಲಕ ಮಾಹಿತಿ ತಿಳಿಸಿಕೊಟ್ಟರು. ಹಾಗೂ ರಂಗ ಕಲೆ ತರಬೇತಿ, ನೃತ್ಯ, ಸಂಗೀತ, ಪೇಪರ್ ಕಪ್ ಪಿರಮಿಡ್, ಚಟುವಟಿಕೆಯನ್ನು ನಡೆಸಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.