ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ವರ್ಚಲ್ ಅನಾಲಿಸಿಸ್ ಆಂಡ್ ಡಿಸೆನರ್, ಸಿಎನ್‌ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುಯಲ್ ಅನಲೈಸಿನ್ ಅಂಡ್ ಡಿಸೈನರ್. ಇಂಡಸ್ಟ್ರೀಯಲ್ ರೋಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್, ಇಂಜನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಹಾಗೂ ಮ್ಯಾನುಫ್ಯಾಕ್ಚರಿಂಗ್ ಪ್ರೋಸಸ್ ಕಂಟ್ರೊಲ್ ಅಂಡ್ ಆಟೋಮೇಷನ್ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವುದು.
ಆಸಕ್ತರು ಸಂಸ್ಥೆಯ ವೆಬ್‌ಸೈಟ್ www.cite.karnataka.gov.in ಮೂಲಕ ಮೇ 28 ರೊಳಗಾಗಿ ಅರ್ಜಿ ಸಲ್ಲಿಸಿ, ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐಗಳಲ್ಲಿ ಮೂಲ ದಾಖಲಾತಿಗಳನ್ನು ನಿಗಧಿತ ದಿನಾಂಕಗಳೊಳಗೆ ಪರಿಶೀಲನೆ ಮಾಡಿಕೊಳ್ಳುವಂತೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು, ಕಾರ್ಗಲ್, ಸಾಗರ ತಾಲೂಕು ಹಾಗೂ ದೂ.ಸಂ.: 7899017818/ 9448622870 ಗಳನ್ನು ಸಂಪರ್ಕಿಸುವುದು.