ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಕಚೇರಿಯ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗಾಗಿ ಚುನಾವಣಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ತರಬೇತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮತ್ತು ಅಚ್ಚುಕಟ್ಟು ಭಾಗದ ರೈತರುಗಳು ಉಪಸ್ಥಿತರಿದ್ದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿಗಳ ಬಗ್ಗೆ ವಿವರಿಸುತ್ತಾ. ನೀರು ಬಳಕೆ ಸಹಕಾರ ಸಂಘಗಳಿಗೆ ಆರ್ಥಿಕವಾಗಿ ಸದೃಢಗೊಳ್ಳುವಂತೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕಾಲ ಕಾಲಕ್ಕೆ ನೀರಿನ ಶುಲ್ಕ ಸಂಗ್ರಹಿಸಿ ಕಾರ್ಯ ನಿರಂತರವಾಗಬೇಕು ಹಾಗೂ ನೀರನ್ನು ಮಿತವಾಗಿ ಬಳಸಬೇಕು ರೈತರು ಒಗ್ಗಟ್ಟಿನಿಂದ ಬೆಳೆಗಳನ್ನು ಬೆಳೆಯಬೇಕು ತಿಳಿಸಿದರು.

ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ), ಹಾಗೂ ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *