ರಾಜ್ಯದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ಮುಖ್ಯಸ್ಥರಾದ ಮೋಹನ್ ರವರ ನೇತೃತ್ವದಲ್ಲಿ ಹುಟ್ಟುಹಬ್ಬ ಆಚರಿಸಿದರು.
ದೇಶದ ಗಡಿಭಾಗದಲ್ಲಿ ಮತ್ತು ವಿವಿಧ ಕಡೆ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರಿಗೆ ಸನ್ಮಾನಿಸಿ ಗೌರವ ಕೊಡುವ ಮೂಲಕ ಹುಟ್ಟುಹಬ್ಬ ಆಚರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಯೋಧರು ನಮ್ಮ ಸೇವೆಯನ್ನು ಗುರುತಿಸಿ ಡಿಕೆ ಶಿವಕುಮಾರ್ ಅಭಿಮಾನಿ ಸಂಘದಿಂದ ಸನ್ಮಾನಿಸುವುದು ಸಂತೋಷದ ಸಂಗತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ವಾಮೀಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ಕೂಡ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ಮತ್ತು ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.