2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ.
2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ತೆರಳಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್ ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಮೇ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.