
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಮೇ 29 ರಿಂದ ಜೂನ್ 27 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ 28 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.