2025-26ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಬಿ ಮತ್ತು ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಪಿ.ಯು.ಸಿ., ಐ.ಟಿ.ಐ. ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್‌ಸಿ/ಎಸ್‌ಟಿಯವರಿಗೆ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ,2ಬಿ,3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳಿಗೆ ರೂ. 1.00 ಲಕ್ಷದೊಳಗಿರಬೇಕು.
ಆಸಕ್ತರು ವೆಬ್‌ಸೈಟ್ https://shp.karnataka.gov.in/bcwd ರಲ್ಲಿ ಜೂ.20 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಪಡೆಯುವುದು ಮತ್ತು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹಾಗೂ ಮೊ.ಸಂ.: 8050770004 / 8050770005 ಗಳನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *