ಆಶ್ರಯ ಕಛೇರಿಯಲ್ಲಿ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನೇತೃತ್ವದಲ್ಲಿ ಆಶ್ರಯ ಸಮಿತಿಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಚರ್ಚಿಸಲಾದ ಪ್ರಮುಖ ಅಂಶಗಳು:
1. ಅಾಶ್ರಯ ನಿವೇಶನಗಳ ಖಾತೆ ವರ್ಗಾವಣೆಯಲ್ಲಿ ಉಂಟಾಗುತ್ತಿರುವ ತೊಂದರೆಗಳು:
ಫಲಾನುಭವಿಗಳಿಗೆ ನಿವೇಶನಗಳ ಖಾತೆಗಳನ್ನು ವರ್ಗಾಯಿಸುವಲ್ಲಿ ಉಂಟಾಗುತ್ತಿರುವ ಬಗ್ಗೆ ಚರ್ಚಿಸಿ, ಈ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಹಿಡಿಯಲು ಸಂಬಂಧಿಸಿದ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.2. ಗೋವಿಂದಪುರದಲ್ಲಿ ಉಳಿದಿರುವ ಮನೆಗಳ ನಿರ್ಮಾಣದಲ್ಲಿ ಗುತ್ತಿಗೆದಾರರಿಂದ ಆಗುತ್ತಿರುವ ವಿಳಂಬ:
ಗುತ್ತಿಗೆದಾರರಿಂದ ಮನೆ ನಿರ್ಮಾಣದ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಚರ್ಚೆ ನಡೆಸಿ, ಪ್ರಗತಿಯ ವಿಳಂಬಕ್ಕೆ ಕಾರಣವಾಗುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು.3. ಅಾಶ್ರಯ ಫಲಾನುಭವಿಗಳಿಗೆ ಬ್ಯಾಂಕ್ ಲೋನ್ ಮಂಜೂರಿನಲ್ಲಿ ಆಗುತ್ತಿರುವ ವಿಳಂಬ:
ಫಲಾನುಭವಿಗಳಿಗೆ ಗೃಹ ನಿರ್ಮಾಣಕ್ಕಾಗಿ ಲೋನ್ ನೀಡುವಲ್ಲಿ ಕೆಲ ಬ್ಯಾಂಕುಗಳಿಂದ ವಿಳಂಬವಾಗುತ್ತಿರುವ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಿ, ಈ ಕುರಿತು ಬ್ಯಾಂಕ್ ಅಧಿಕಾರಿಗಳೊಂದಿಗೆ ವಿಶೇಷ ಸಭೆ ಕರೆದು ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಲು ತಿಳಿಸಿದರು.
ಸಭೆಯ ಸಂದರ್ಭದಲ್ಲಿ ಆಶ್ರಯ ಸಮಿತಿ ಸದಸ್ಯರು, ಪಾಲಿಕೆ ವ್ಯಾಪ್ತಿಯ ಕಂದಾಯ ಅಧಿಕಾರಿಗಳು, ಎಂಜಿನಿಯರ್ಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.