ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ದಿನಾಂಕ:05-05-2025 ರಿಂದ ರಾಜ್ಯಾದ್ಯಂತ ಮೂರು ಹಂತದಲ್ಲಿ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದ್ದು, ಸಮೀಕ್ಷೆಯ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ.
ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 05 ರಿಂದ 25, ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 26 ರಿಂದ 28 ಹಾಗೂ ಸ್ವಯಂ ಘೋಷಣೆ (ಆನ್‌ಲೈನ್ ಮೂಲಕ) ಅವಧಿ ಮೇ 19 ರಿಂದ 28ರವರೆಗೆ ವಿಸ್ತರಿಸಲಾದ ದಿನಾಂಕದ ಬಗ್ಗೆ ಜಿಲ್ಲೆಯ ನಾಗರೀಕರಿಗೆ ಮಾಹಿತಿ ನೀಡುವ ಸಲುವಾಗಿ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳು ಈ ದಿನ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕ್ಷೇತ್ರ ಶಿಕ್ಷಣಾಧಿಕಾರಿ, ಶಿವಮೊಗ್ಗ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.