
ಶಿವಮೊಗ್ಗ ನಗರದ ಖಾಸಗಿ ನಿಲ್ದಾಣ ಅಶೋಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕಮಲ್ ಹಾಸನ್ ಹೇಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಅವರು 5ನೇ ತಾರೀಕಿನಂದು ಬಿಡುಗಡೆಗೊಳ್ಳಲಿರುವ ಕಮಲ ಹಾಸನ್ ಚಲನಚಿತ್ರ ಬಿಡುಗಡೆ ಮಾಡದಂತೆ ಆಗ್ರಹಿಸಿದರು. ನಗರದ ಯಾವುದೇ ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಬಾರದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಮಾಲ್ತೇಶ್, ಜಿಲ್ಲಾ ಉಪಾಧ್ಯಕ್ಷ ವಿಜಯ ಕುಮಾರ್, ಜಿಲ್ಲಾ ಖಜಾಂಚಿ ಗಣೇಶ್, ಪ್ರಧಾನ ಕಾರ್ಯದರ್ಶಿ ಮೊಹದ್ ಶಫಿ, ಶಿಕಾರಿಪುರದ ಗೌರವಾಧ್ಯಕ್ಷ ಶಿವಯ್ಯ ಶಾಸ್ತ್ರಿ, ಜೀವನ್, ಉಮೇಶ್ ಗದ್ದೆಮನೆ, ಮನು, ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.