ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್ ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್‌ಷಿಪ್ ಪೋರ್ಟಲ್‌ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಹೆಚ್.ರಸ್ತೆ, ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂ.ಸಂ.: 08182-240512 ನ್ನು ಸಂಪರ್ಕಿಸುವುದು.