ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 11ನೇ ವರ್ಷದ ಸರ್ಕಾರ ಅಧಿಕಾರಕ್ಕೆ ದಾಖಲೆ ನಿರ್ಮಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೋದಿ ಅವರ ನೇತೃತ್ವದ ಸರ್ಕಾರ 11 ನೇ ವರ್ಷ ಫೂರೈಸಿದೆ. ಇಡೀ ಜಗತ್ತು ಇಂದು ಮೋದಿ ನಾಯಕತ್ವದ ಬಗ್ಗೆ ಮಾತನಾಡುತ್ತಿದೆ. ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಭಾರತವನ್ನು ವಿಶ್ವ ಗುರುವನ್ನಾಗಿಸುವ ಕಡೆಗೆ ದೇಶವನ್ನು ಮೋದಿ ಮುನ್ನಡೆಸುತ್ತಿದ್ದಾರೆ.ವಿಕಸಿತ ಭಾರತದ ಸಂಕಲ್ಪದ ಮೂಲಕ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ ಎಂದರು.

ದೇಶದ ಶತ ಕೋಟಿ ಜನರ ಭರವಸೆ ಈಡೇರಿಸುವ ಕಡೆಗೆ ಗಮನ ಹರಿಸಿದ್ದಾರೆ.ಮೂಲ ಸೌಕರ್ಯ ಸೇರಿದಂತೆ ಹಲವು ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ವಸತಿ, ಕೃಷಿ, ರೈಲ್ವೆ, ಆರೋಗ್ಯ, ಮಹಿಳೆಯರು, ಹೆದ್ದಾರಿ ಸೇರಿದಂತೆ ಹಲವಾರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಗಮನ ನೀಡಿದ್ದಾರೆ ಕುರಿತು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಇದರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. ರೈಲ್ವೆ ಸೇರಿದಂತೆ ಹಲವು ಯೋಜನೆಗಳಿಗೆ ಸಾಕಷ್ಟು ಹಣಕಾಸಿನ ನೆರವು ನೀಡಿದ್ದಾರೆ ಎಂದರು

ಜಿಎಸ್‌ಟಿ ಕುರಿತು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಇದರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. ರೈಲ್ವೆ ಸೇರಿದಂತೆ ಹಲವು ಯೋಜನೆಗಳಿಗೆ ಸಾಕಷ್ಟು ಹಣಕಾಸಿನ ನೆರವು ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಚನ್ನಬಸಪ್ಪ  ಡಾ ಧನಂಜಯ್ ಸರ್ಜಿ ಡಿ ಎಸ್ ಅರುಣ್ ದತ್ತಾತ್ರಿ ಜಗದೀಶ್ ಅಣ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.