ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಮೊದಲ ಹಂತದಲ್ಲಿ ಶಿವಮೊಗ್ಗ ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾ.ಪಂ ವ್ಯಾಪ್ತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಸದಾಶಿವಪುರ ಗ್ರಾಮಗಳಲ್ಲಿ ಜೂ.15 ರಿಂದ ಜೂ.30 ರವೆಗೆ 17 ವಿವಿಧ ಇಲಾಖೆಗಳಿಂದ ನೀಡಲಾಗುವ ಮೂಲಭೂತ ಸೌಲಭ್ಯಗಳ ಕುರಿತಾಗಿ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಈ ಗ್ರಾಮಗಳ ಬುಡಕಟ್ಟು ಜನಾಂಗದವರು ಈ ಯೋಜನೆಯ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ.
2024-25ನೇ ಸಾಲಿನ ಆರ್ಥಿಕ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವಂತೆ ದೇಶದಾದ್ಯಂತ ಬಹುಸಂಖ್ಯಾತ ಬುಡಕಟ್ಟು ಸಮುದಾಯದ 63 ಸಾವಿರ ಗ್ರಾಮಗಳನ್ನು ಹಾಗೂ 5 ಕೋಟಿ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಮಗ್ರ ಅಭಿವೃದ್ದಿಯ ಗುರಿ ಹೊಂದಿದ್ದು, ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಪಿಎಂ ಜನ್‌ಮನ್ ಯೋಜನೆಯಿಂದ ಸ್ಪೂರ್ತಿ ಪಡೆದಿದೆ.
2024-25 ನೇ ಸಾಲಿನಿಂದ 2029ನೇ ಸಾಲಿನ ವರ್ಷಗಳ ಈ ಅಭಿಯಾನಕ್ಕೆ ಕೇಂದ್ರ ಬುಡಕಟ್ಟು ಮಂತ್ರಾಲಯ ನೋಡಲ್ ಸಚಿವಾಲಯ 17 ಇಲಾಖೆಗಳ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿ ಮಾಡುತ್ತಿದ್ದು, ಬುಡಕಟ್ಟು ಸಮುದಾಯಗಳ ಅಭಿವೃದ್ದಿ ಕ್ರಿಯಾ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ.79.156 ಕೋಟಿ ಅನುದಾನಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
2024-25 ರಿಂದ 2025-26ರ ಆರ್ಥಿಕ ಸಾಲುಗಳಿಗೆ ಮೊದಲ ಹಂತದಲ್ಲಿ ರೂ.4000 ಕೋಟಿ ಅನುದಾನ ನಿಗದಿಗೊಳಿಸಿದೆ. ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಶಿವಮೊಗ್ಗ ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾ.ಪಂ ವ್ಯಾಪ್ತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಸದಾಶಿವಪುರ ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗದಿಗೊಳಿಸಲಾಗಿದೆ.
ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಪಕ್ಕಾ ಮನೆಗಳು, ಸಂಪರ್ಕ ರಸ್ತೆ, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು-ಜಲ ಜೀವನ್ ಮೀಷನ್, ವಿದ್ಯುತ್ ಇಲಾಖೆಯಿಂದ ಮನೆ ವಿದ್ಯುಧೀಕರಣ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಫ್-ಗ್ರಿಡ್ ಸೌರ, ಹೊಸ ಸೌರ ವಿದ್ಯುತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಂಚಾರಿ ವೈದ್ಯಕೀಯ ಘಟಕಗಳು ರಾಷ್ಟಿçÃಯ ಆರೋಗ್ಯ ಮಿಷನ್, ಆಯುಷ್‌ಮಾನ್ ಕಾರ್ಡ್-ಪ್ರಧಾನ ಮಂತ್ರಿ ಜನ ಆರೋಗ್ಯ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯಿಂದ ಸಂಪರ್ಕಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಅಭಿವೃದ್ದಿ-ಪೋಷನ್ ಅಭಿಯಾನ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ನಿಲಯಗಳ ನಿರ್ಮಾಣ- ಸಮಗ್ರ ಶಿಕ್ಷಾ ಅಭಿಯಾನ, ಆಯುಷ್ ಇಲಾಖೆಯಿಂದ ಪೋಷನ್ ವಾಟಿಕಾಸ್- ರಾಷ್ಟಿçÃಯ ಆಯುಷ್ ಮಿಷನ್, ಟೆಲಿಕಾಂ ಇಲಾಖೆಯಿಂದ ಯುನಿವರ್ಸಲ್ ಸೇವೆ(ಆಬ್ಲಿಗೇಷನ್ ನಿಧಿ-ಭಾರತ್ ನೆಟ್), ಕೌಶಲ್ಯಭಿವೃದ್ದಿ ಇಲಾಖೆಯಿಂದ ಸ್ಕಿಲ್ ಇಂಡಿಯಾ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟಾçನಿಕ್ಸ್ ಇಲಾಖೆಯಿಂದ ಡಿಜಿಟಲ್ ಇನಿಶಿಯೇಟಿವ್ಸ್, ಕೃಷಿ ಇಲಾಖೆಯಿಂದ ಸುಸ್ತಿರ ಕೃಷಿ ಉತ್ತೇಜನ, ಮೀನುಗಾರಿಕೆ ಇಲಾಖೆಯಿಂದ ಮೀನು ಸಂಸ್ಕೃತಿಯ ಬೆಂಬಲ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯಿಂದ ಜಾನುವಾರು ಪಾಲನೆ-ರಾಷ್ಟಿçÃಯ ಜಾನುವಾರ ಮಿಷನ್, ಪಂಚಾಯತ್ ರಾಜ್ ಇಲಾಖೆಯಿಂದ ಸಾಮರ್ಥ್ಯದ ಕಟ್ಟಡ – ರಾಷ್ಟಿçÃಯ ಗ್ರಾಮ ಸ್ವರಾಜ್ ಅಭಿಯಾನ, ಪ್ರವಾಸೋದ್ಯಮ ಇಲಾಖೆಯಿಂದ ಟ್ರೆöÊಬಲ್ ಹೋಮ್ ಸ್ಟೇ-ಸ್ವದೇಶ್ ದರ್ಶನ, ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.