ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ವರದಿಯಾಗುವ ರಸ್ತೆ ಅಫಘಾತ ಪ್ರಕರಣಗಳನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಮತ್ತು ವಾಹನ ಸವಾರರ ಸುಗಮ ಸಂಚಾರದ ಸಲುವಾಗಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ, ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ತುಂಗಾನಗರ ಪೊಲೀಸ್ ಠಾಣಾ ಸರಹದ್ದಿಗೆ ಬರುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ರಸ್ತೆಗಳಲ್ಲಿ ಪ್ರಮುಖ 23 ಸ್ಥಳಗಳನ್ನು ಗುರುತಿಸಿ, ದಿನಾಂಕಃ 13-06-2025 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸದರಿ ಸ್ಥಳಗಳಲ್ಲಿ Digitally printed Cautionary and Informatory Signboards ಗಳನ್ನು ಅಳವಡಿಸಲಾಗಿದೆ.
