ಮಾದಕ ವಸ್ತು ಗಾಂಜಾ ವಿರುದ್ಧ ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ಸಾಮೂಹಿಕ ಅರಿವು ಮೂಡಿಸುವ ಹಿನ್ನೆಲೆಯಲ್ಲಿ,
20-06-2025 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಅರಿವು ಕಾರ್ಯಕ್ರಮವನ್ನು ಆಯೋಜಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತು ಗಾಂಜಾದ ಸೇವನೆಯ ದುಷ್ಪರಿಣಾಮಗಳು ಹಾಗೂ ಮಾದಕ ದ್ರವ್ಯಗಳು ವ್ಯಸನಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟುಮಾಡುವ ಪರಿಣಾಮಗಳ ಬಗ್ಗೆ ಮತ್ತು ಒಂದು ಬಾರಿ ಮಾದಕ ದ್ರವ್ಯ ಸೇವನೆಗೆ ಒಂದು ಬಾರಿ ತುತ್ತಾದರೆ ಅದರಿಂದ ಶೈಕ್ಷಣಿಕ ಜೀವನ ಮತ್ತು ಸಾಮಾಜಿಕ ಜೀವನದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ವಿವರಿಸಿರುತ್ತಾರೆ.
ಮಾದಕ ದ್ರವ್ಯದ ವಿರುದ್ಧ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ, ಎಲ್ಲರು ಸೇರಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಶ್ರಮಿಸೋಣವೆಂದು ಪ್ರತಿಜ್ಞೆ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಪಿಎಸ್ಐ ತಿರುಮಲ್ಲೇಶ್ ಮತ್ತು ಆಂಟೋನಿ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.