ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ರೇಡ್ ನಡೆದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿರುವ ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಮಂಜುನಾಥ್ ಚೌಧರಿ ರವರ ನೇತೃತ್ವದಲ್ಲಿ ದಾಳಿ ನಡೆಸಿದೆ.

ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಭಾಗವಾದ ಸಾವಯವ ಕೃಷಿ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್ ಪ್ರದೀಪ್ ಕಾಶಿಪುರದ ಮನೆ ಮೇಲೆ ದಾಳಿ ಮಾಡಲಾಗಿದೆ.ಫಾರಂ ಹೌಸ್ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇದಲ್ಲದೆ ಶಿವಮೊಗ್ಗದ ಎರಡು ಕಚೇರಿಗಳ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ರಾಜ್ಯದ್ಯಂತ ಸರ್ಕಾರದ ಕೆಲವು ಇಲಾಖೆ ಅಧಿಕಾರಿಗಳ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.