ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾಗಿ ಎಸ್. ಪರಮೇಶ್ವರ್‌ರವರು ಸರ್ವಾನುಮತದಿಂದ ಆಯ್ಕೆಯಾದರು.
ನೂತನ ಅಧ್ಯಕ್ಷರಾದ ಪರಮೇಶ್ವರ್ ಮಾತನಾಡಿ ಸಮಾಜಕ್ಕೆ ಏನಾದರೂ ವಿಶೇಷವಾಗಿ ಮಾಡಬೇಕೆಂಬ ಆಸೆಯಿದೆ. ಸಣ್ಣ-ಪುಟ್ಟ ಸಮಾಜಗಳ ಕೂಡ ಅಭಿವೃದ್ಧಿಗೊಂಡಿವೆ. ಸವಿತಾ ಸಮಾಜದಲ್ಲಿ ಒಗ್ಗಟ್ಟಿನ ಕೊರತೆಯಿದೆ. ಗುರಿ ಮುಟ್ಟಬೇಕಾದರೆ ಸಮಾಜದ ಒಗ್ಗಟ್ಟು ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರನ್ನು ಜೋಡಿಸಿಕೊಂಡು ಸದಸ್ಯರ ಸಂಖ್ಯೆ ಹೆಚ್ಚಿಸಿ, ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಚಿಂತಿಸಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು ನಿರ್ದೇಶಕರು ಮುಖಂಡರು ಮತ್ತು ಸಮಾಜದ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.