ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ನಡೆಯಿತು.
ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ #ಶ್ರೀ ನಿಗಮ್_ಭಂಡಾರಿ ರವರು, ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ,ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಶ್ರೀ ಎಚ್.ಎಸ್. ಮಂಜುನಾಥ್ ಗೌಡ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಯುವ ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಕುರಿತು ಬಹುಮುಖ್ಯ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಿದರು.
ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲಿಷ್ಕಾ ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಸನ್ನ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಯಾಗಿರುವ ಅಕ್ಷಯ್ ಪಾಟೀಲ್, ಕಾರ್ಯದರ್ಶಿಗಳಾದ ಅಭಿಷೇಕ್ ರೆಡ್ಡಿ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಶಿತ್ ಗೌಡ ಮಾಜಿ ಅಧ್ಯಕ್ಷರಾದ ಗಿರೀಶ್ ಪದಾಧಿಕಾರಿಗಳು ಜಿಲ್ಲೆಯ ಎಲ್ಲಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.