ಜೂನ್.27(ಕರ್ನಾಟಕ ವಾರ್ತೆ): ಶಿವಮೊಗ್ಗ ತಾಲ್ಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಗ್ಯಾರಂಟಿ ಯೋಜನೆಯಗಳ ಅನುμÁ್ಟನ ಸಮಿತಿಯನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಟನ ಸಮಿತಿ ಅಧ್ಯಕ್ಷರಾದ ಮಧು ಹೆಚ್. ಎಂ ತಿಳಿಸಿದರು.
ನಗರದ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಟನದ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳು ಜನ ಸಾಮಾನ್ಯರನ್ನು ಯಶಸ್ವಿಯಾಗಿ ತಲುಪುತ್ತಿದ್ದು, ಜನ ಜೀವನ ಸುಧಾರಣೆ ಕಾಣುತ್ತಿದೆ ಎಂದರು.
ಸದಸ್ಯರು ಗೃಹಲಕ್ಷ್ಮಿ ಯೋಜನೆಯಡಿ ಜಿಎಸ್‍ಟಿ ಗೆ ಸಂಬಂಧಿಸಿದ ಕೆಲವು ಲೋಪದೋಷಗಳು ಕಂಡು ಬರುತ್ತಿರುವುದು ಗಮನಕ್ಕೆ ಬಂದಿದ್ದು ಅವುಗಳನ್ನು ನಿವಾರಣೆ ಮಾಡುವ ಕೆಲಸ ಆಗಬೇಕಿದೆ ಎಂದರು. ಕೆಲವು ಮನೆಗಳಲ್ಲಿ ಮನೆಯ ಯಾಜಮಾನಿಯ ಸಾವು ಆದ ಸಮಯದಲ್ಲಿ ಅದೇ ಮನೆಯ ಬೇರೆ ಸದಸ್ಯರನ್ನು ಮನೆಯ ಯಜಮಾನಿಯನ್ನಾಗಿ ಮಾಡಿ ಸೌಲಭ್ಯ ಮುಂದುವರಿಸುವಂತೆ ಹೇಳಿದರು.
ಅನ್ನಭಾಗ್ಯ ಯೋಜನೆಯು ಸರಿಯಾದ ರೀತಿಯಲ್ಲಿ ಎಲ್ಲಾ ಪಡಿತರ ಕುಟುಂಬಗಳಿಗೆ ಸರಬರಾಜು ಆಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ, ಸರಿಯಾದ ರೀತಿಯಲ್ಲಿ ವಿತರಣೆ ಆಗದ ಪಡಿತರ ಅಂಗಡಿಯ ಮಾಹಿತಿಯನ್ನು ಪಡೆದು, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಮಾತಾನಾಡಿ ಸಮಸ್ಯೆಯನ್ನು ಬಗೆಹರಿಸಿದರು.
ಶಿವಮೊಗ್ಗ ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೇ ಮಾಹೆವರೆಗೆ 107311 ಮಹಿಳೆಯರು ನೋಂದಣಿಯಾಗಿದ್ದು, 99324 ಮಹಿಳೆಯರಿಗೆ ಮೇ ಮಾಹೆವರೆಗೆ ಹಣ ಜಮಾ ಆಗಿರುತ್ತದೆ. ಅನ್ನಭಾಗ್ಯ ಯೋಜನೆಯಡಿ ತಾಲ್ಲೂಕಿನಲ್ಲಿ 43681 ಬಿಪಿಎಲ್ ಕುಟುಂಬಗಳ 144286 ಸದಸ್ಯರು ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಶಿವಮೊಗ್ಗ ತಾಲ್ಲೂಕಿನಲ್ಲಿ 236023743 ಯುನಿಟ್‍ಗಳ ಬಳಕೆಯಾಗಿದ್ದು ರೂ. 1690231564 ಸಬ್ಸಿಡಿ ದೊರೆತಿದೆ. ಶಕ್ತಿ ಯೋಜನೆಯಡಿ ತಾಲ್ಲೂಕಿನಲ್ಲಿ ಶೇ.61.5 ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಕೆಎಸ್‍ಆರ್‍ಟಿಸಿಗೆ ಮೇ ಮಾಹೆವರೆಗೆ ರೂ.644765147 ಆದಾಯ ಗಳಿಕೆ ಆಗಿದೆ.
ಯುವನಿಧಿ ಯೋಜನೆಯು ಬಹಳ ಯಶಸ್ವಿಯಾಗಿ ನಡೆಯುತ್ತಿದ್ದು ಇನ್ನೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಈ ಯೋಜನೆಯಡಿ ಫಲಾನುಭವಿಗಳಾಗುವಂತೆ ಮಾಡಬೇಕು. ಈ ಯೋಜನೆಯ ಬಗ್ಗೆ ಯುವಜನತೆಗೆ ತಿಳಿಯುವಂತೆ ಮಾಡಬೇಕು. ಮೇ ತಿಂಗಳಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ 2482 ಜನ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರೂ.58,81,500 ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಈ ಸಭೆಯಲ್ಲಿ ಶಿವಮೊಗ್ಗ ತಾಲ್ಲೂಕು ಸಹಾಯಕ ಲೆಕ್ಕಾಧಿಕಾರಿ ಶ್ರೀಧರ್ ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಯಗಳ ಅನುμÁ್ಟನ ಸಮಿತಿಯ ಸದಸ್ಯರುಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.