ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದ ರವರ ನೇತೃತ್ವದಲ್ಲಿ ತಮ್ಮ ನ್ಯಾಯಯುತ ಬೇಡಿಕೆಯನ್ನು ಇಡೇರಿಸುವಂತೆ ಆಗ್ರಹಿಸಿ ಪಾಲಿಕೆ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ನೌಕರರ 6 ಬೇಡಿಕೆಗಳು ತುಂಬಾ ಸರಳ ಬೇಡಿಕೆಗಳಾಗಿದ್ದು ರಾಜ್ಯ ಸರ್ಕಾರ ಅದನ್ನು ಸುಲಭವಾಗಿ ಈಡೇರಿಸಬಹುದು.ಈ ನೌಕರರರ ಬೇಡಿಕೆಗಳು ನೈಜ ವಾಗಿರುವುದರಿಂದ ನಾನು ಸಹ ನೌಕರರಿಗೆ ಬೆಂಬಲವನ್ನು ಸೂಚಿಸುತ್ತಿದ್ದೇನೆ. ಹಾಗೆಯೇ ರಾಜ್ಯದ ಸರ್ಕಾರಿ ನೌಕರರ ಸಂಘ ಮಹಾನಗರ ಪಾಲಿಕೆ ಜೊತೆ ಕೈ ಜೋಡಿಸುತ್ತದೆ ಎಂದರು.
ನೌಕರರರ ಬೇಡಿಕೆಗಳು…
7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಬೇಕು.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ, ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ / ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.
ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡುವಂತೆ ಆಗ್ರಹಿಸಿ ಪೌರಕಾರ್ಮಿಕರು ಆಗ್ರಹ.