ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ (ರಿ.)ದ ಕರೆಯ ಮೇರೆಗೆ ರಾಜ್ಯದಾದ್ಯಂತ ಪಾಲಿಕೆ ನೌಕರರು ನಡೆಸುತ್ತಿರುವ ಮುಷ್ಕರದ ಭಾಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ಮೂರು ದಿನಗಳಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಆದ್ಯತೆ ಮೇರೆಗೆ ಬೇಡಿಕೆಗಳನ್ನು ಪರಿಗಣಿಸುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೀಶ್ ನಗರ ಅಧ್ಯಕ್ಷ ಮೋಹನ್ ರೆಡ್ಡಿ ಮಾಜಿ ಪಾಲಿಕೆ ಸದಸ್ಯರು ಮಾಲತೇಶ್ ರಾಜೇಶ್ ಕಾಮತ್ ಅಣ್ಣಪ್ಪ ಮುಂತಾದ ಮುಖಂಡರು ಸದಸ್ಯರು ಉಪಸ್ಥಿತರಿದ್ದರು.