“ಚಾತುರ್ಮಾಸ್ಯ ವ್ರತಾಚರಣೆ”

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ “ಚಾತುರ್ಮಾಸ್ಯ ವ್ರತಾಚರಣೆ” ಸಮಾರಂಭದಲ್ಲಿ ಪಾಲ್ಗೊಂಡು, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರುಪೀಠದ ಪೀಠಾದೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.ಬಳಿಕ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಫಲಮಂತ್ರಾಕ್ಷತೆ ಪಡೆದು, ಆಶೀರ್ವಾದ ಪಡೆದೆನು.

ಸಮಾರಂಭದಲ್ಲಿ ಸಚಿವರಾದ ಶ್ರೀ ಮಂಕಾಳ್ ಎಸ್ ವೈದ್ಯ, ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದಿನಕರ್ ಕೆ ಶೆಟ್ಟಿ, ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜ, ಮಾಜಿ ಶಾಸಕರಾದ ಶ್ರೀ ಶಿವಾನಂದ ನಾಯ್ಕ್, ಶ್ರೀ ಸುನಿಲ ನಾಯ್ಕ್ ಸೇರಿದಂತೆ ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ನಾಯ್ಕ ಸೇರಿದಂತೆ ಗಣ್ಯರು, ಮುಂಚೂಣಿ ಘಟಕದ ನಾಯಕರು ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.