ಗೃಹಲಕ್ಷಿö್ಮ ಯೋಜನೆಯು ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗೃಹಲಕ್ಷಿö್ಮ ಹಣದಿಂದ ಸಾಧನೆ ಮಾಡಿದ ಜಿಲ್ಲೆಯ ಆಯ್ದ ಸಾಧಕ ಮಹಿಳೆಯರೊಂದಿಗೆ ಜಿಲ್ಲಾ ಮಟ್ಟದ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.
ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಗೃಹಲಕ್ಷಿö್ಮ ಯೋಜನೆಯ ಮಹಿಳಾ ಫಲಾನುಭವಿಗಳ ಸಂವಾದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲವೊಂದು ತಾಂತ್ರಿಕ ದೋಷಗಳಿಂದ ಕೆಲವು ಫಲಾನುಭವಿಗಳಿಗೆ ಗೃಹಲಕ್ಷಿö್ಮ ಹಣ ಜಮಾ ಆಗುವುದು ತಡವಾಗುತ್ತಿದ್ದು, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಉಳಿದಂತೆ ಹಣವು ಸಮರ್ಪಕವಾಗಿ ಎಲ್ಲ ಫಲಾನುಭವಿಗಳಿಗೆ ಜಮೆಯಾಗುತ್ತಿದೆ.
ಜುಲೈ 2023 ರಿಂದ ಜೂನ್ 2025 ರವರೆಗೆ ಜಿಲ್ಲೆಯಲ್ಲಿ ಒಟ್ಟು 4,01,440 ಮಹಿಳೆಯರು ಈ ಯೋಜನೆಯಡಿ ನೋಂದಣಿಯಾಗಿದ್ದು, 2025ರ ಮೇ ಮಾಹೆವರೆಗೆ 3,72,752 ಫಲಾನುಭವಿಗಳಿಗೆ ಹಣ ಪಾವತಿಯಾಗಿದೆ. ಭದ್ರಾವತಿ-72,458, ಹೊಸನಗರ-26,336, ಸಾಗರ-42,078, ಶಿಕಾರಿಪುರ-54,067, ಶಿವಮೊಗ್ಗ-99,324, ಸೊರಬ-47,753, ತೀರ್ಥಹಳ್ಳಿ-30,732 ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷಿö್ಮ ಯೋಜನೆಯ ಫಲಾನುಭವಿಗಳ ಸಂವಾದ ಕಾರ್ಯಕ್ರಮದ ಜವಾಬ್ದಾರಿಯನ್ನು ಆಯಾ ತಾಲ್ಲೂಕು ಮಟ್ಟದ ಅಧ್ಯಕ್ಷರಿಗೆ ನೀಡಲಿದ್ದು, ಅವರು ತಮ್ಮ ತಾಲ್ಲೂಕಿನಿಂದ 20 ಮಹಿಳಾ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಾಲ್ಲೂಕಿನ ಸಿಡಿಪಿಓ ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು.
ಅಧಿಕಾರಿಗಳು ಫಲಾನುಭವಿಗಳನ್ನು ಸಂವಾದ ಕಾರ್ಯಕ್ರಮಕ್ಕೆ ಕರೆತರುವ ಎಲ್ಲಾ ತಯಾರಿಯನ್ನು ಮಾಡುತ್ತಾರೆ ಎಂದು ಸೂಚಿಸಿದರು.
ಈ ಸಂವಾದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗೃಹಲಕ್ಷಿö್ಮ ಯೋಜನೆಯಿಂದ ಮಹಿಳೆಯರಿಗಾದ ಅನುಕೂಲ, ಇದರಿಂದ ಅವರ ಬದುಕಿನಲ್ಲಿ ಆದ ಬದಲಾವಣೆ, ಯಶೋಗಾಥೆ ಅಥವಾ ಸಾಧನೆಗೈದಿರುವ ಫಲಾನುಭವಿಗಳ ಅನುಭವ ಹಂಚಿಕೊಳ್ಳಲು ಅವಕಾಶ ನೀಡಲಾಗುವುದು. ಅವರ ಸಾಧನೆಗಳ ಕುರಿತು ವಿಡಿಯೋ ತುಣುಕನ್ನು ಕಾರ್ಯಕ್ರಮದಲ್ಲಿ ಪ್ರಸಾರ ಮಾಡುಲಾಗುವುದು ಹಾಗೂ ಅವರೊಂದಿಗೆ ಸಂವಾದ ಮಾಡಲು ಅವಕಾಶ ನೀಡಲಾಗುವುದು ಎಂದರು.
ಈಗಾಗಲೇ ಅಧಿಕಾರಿಗಳು ಹಾಗೂ ತಾಲ್ಲೂಕು ಅಧ್ಯಕ್ಷರು, ಸದಸ್ಯರೊಂದಿಗೆ ಕಾರ್ಯಕ್ರಮದ ಕುರಿತು ಚರ್ಚೆ ನಡೆಸಿದ್ದು, ಇನ್ನಷ್ಟು ಹೆಚ್ಚಿನ ಮಟ್ಟದಲ್ಲಿ ಕಾರ್ಯಕ್ರಮದ ರೂಪರೇಷಗಳ ಬಗ್ಗೆ ಹಾಗೂ ಸ್ಥಳ, ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಗೂ ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಬಣಕಾರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.