ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ತಿಳಿದು ಶಾಸಕರು ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಅಸ್ವಸ್ಥ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.