ಪ್ರಥಮ ಹಂತದಲ್ಲಿ ಜೀರ್ಣೋದ್ಧಾರಗೊಂಡು ಈಗಾಗಲೇ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಪೂರೈಸಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ  ಡಾ. ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯೊಂದಿಗೆ ಭೇಟಿ ನೀಡಿದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು, ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ರಾಜ್ಯದಲ್ಲಿ ನಂಬರ್ 1 ದೇವಾಲಯಯಾಗಿ ದೇವಸ್ಥಾನ ಮಾರ್ಪಡಿಕೊಂಡಿದೆ.ದೇವಿಯ ಮುಖದಲ್ಲಿ ಆಕರ್ಷಣೆಯಿದೆ, ಇಲ್ಲಿಗೆ ಬಂದರೆ ನನ್ನ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.