ರಾಜ್ಯದ್ಯಂತ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಇಂದು ಆರನೇ ದಿನಕ್ಕೆ ಕಾಲಿಟ್ಟಿದ್ದೆ.ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದ ತಂಡ ಭೇಟಿ ನೀಡಿ ಸಂಘದ ಅಧ್ಯಕ್ಷ ಗೋವಿಂದರಾಜು ಮತ್ತು ತಂಡಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಮುಖಂಡರು ಆರು ದಿನದಿಂದ ಪ್ರತಿಭಟನೆ ನಡೆಸುತ್ತಿರುವ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ತಂಡ ಈಗ ಭೇಟಿ ನೀಡಿ ಅವರಿಗೆ ಬೆಂಬಲ ಘೋಷಿಸಿದ್ದೇವೆ. ಸರ್ಕಾರ ಸಂಬಂಧಪಟ್ಟ ಸಚಿವರು ಇಲಾಖೆಯ ಕಾರ್ಯದರ್ಶಿಗಳು ಪೌರ ಕಾರ್ಮಿಕರ ಮುಖಂಡರನ ಕರೆದು ಅವರ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು. ಅವರ ನ್ಯಾಯಯುತ ಬೇಡಿಕೆಗಳು ಸರ್ಕಾರ ಮನಗೊಂಡು ಮಾತುಕತೆ ಮೂಲಕ ಬಗೆಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಸಂಘಟನಾ ಕಾರ್ಯದರ್ಶಿ ಡಾ ಸತೀಶ್ ಕುಮಾರ್ ಶೆಟ್ಟಿ ಜನಾರ್ಧನ್ ಪೈ ,ಜನಮೇಜಿ ರಾವ್ , ವಿನೋದ್ ಪೈ , ಪರಿಸರ ರಮೇಶ್ ಮುಂತಾದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.