ಶಿವಮೊಗ್ಗ ನಗರದ ಶಿವಪ್ಪನಾಯಕ ಸರ್ಕಲ್ ನಲ್ಲಿ ಇಂದು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ವಾಟಾಳ್ ವಾಟಾಳ್ ಮಂಜುನಾಥ್ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ಆಚರಿಸಲಾಯಿತು . ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪನವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಸಚಿವರು ಎಲ್ಲಾ ಯುವಕರು ಸಂಗೊಳ್ಳಿ ರಾಯಣ್ಣನಂತೆ ಧೈರ್ಯಶಾಲಿಗಳಾಗಿರಬೇಕು ಅವರ ಆದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ವಾಟಾಳ್ ಮಂಜುನಾಥ್ ರವರು ನಮ್ಮ ಸ್ವಾತಂತ್ರ ಉಚಿತವಾಗಿ ಬಂದಿಲ್ಲ ಎಷ್ಟೋ ಯುವಕರ ರಕ್ತದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ. ನಮ್ಮ ಸಂಘಟನೆ ಎಷ್ಟೋ ಜನರ ಸಮಸ್ಯೆಗಳಿಗೆ ಸ್ಪಂದಿಸಿದೆ ಸಂಘದ ಎಲ್ಲ ಪದಾಧಿಕಾರಿಗಳು ಇನ್ನೂ ಹೆಚ್ಚಿನ ಕೆಲಸ ಮಾಡಿ ಎಂದು ಕರೆ ಕೊಟ್ಟರು. ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ